ಮುಲ್ಕಿ ; ಕಾರು ಢಿಕ್ಕಿ : ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು
Update: 2020-12-16 12:45 IST
ಮಂಗಳೂರು: ಸುರತ್ಕಲ್ ನಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಸವಾರನಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ಸುರತ್ಕಲ್ ಸಮೀಪದ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಝೀಮ್ (20) ಮೃತ ಯುವಕ.
ಮುಲ್ಕಿ ಸಮೀಪದ ಕೋಲ್ನಾಡ್ ಜಂಕ್ಷನ್ ಬಳಿ ರವಿವಾರ ನಡೆದ ಅಪಘಾತದಲ್ಲಿ ಅಝೀಮ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಿಳಿಸಿದ್ದಾರೆ.