ರಾಜ್ಯದಲ್ಲಿ ಜ.1ರಿಂದ ವಿದ್ಯಾಗಮ ಪುನರಾರಂಭ
ಬೆಂಗಳೂರು, ಡಿ.16: ರಾಜ್ಯದ ಎಲ್ಲ ಶಾಲೆಗಳಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜ.1ರಿಂದ ಪುನರ್ ಆರಂಭಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.
ರಾಜ್ಯದಲ್ಲಿನ ಎಲ್ಲ ಮಕ್ಕಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯದಿರುವುದರಿಂದ ವಿದ್ಯಾಗಮ ಕಾರ್ಯಕ್ರಮವನ್ನು ಪುನರ್ ಆರಂಭಿಸಲು ಸರಕಾರವು ರೂಪುರೇಷೆಗಳನ್ನು ಹಾಗೂ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದನ್ನು ಚಾಚೂತಪ್ಪದೆ ಪಾಲಿಸುವ ಮೂಲಕ ವಿದ್ಯಾಗಮ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮಗಳು
-ವಿದ್ಯಾಗಮ ಕಾರ್ಯಕ್ರಮವನ್ನು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಬೇಕು.
-ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಬೆಳಗ್ಗೆ 45 ನಿಮಿಷದ 3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ.
-ವಿದ್ಯಾರ್ಥಿಗಳನ್ನು 7ರಿಂದ 8 ತಂಡಗಳಾಗಿ ವಿಭಾಗ ಮಾಡಿಕೊಂಡು ಕಾರ್ಯಕ್ರಮ ನಡೆಸಲಾಗುತ್ತದೆ.
-ವಿದ್ಯಾಗಮ ತರಗತಿಯ ವೇಳೆ ಸುರಕ್ಷತೆಯ ಅಂತರ, ಮಾಸ್ಕ್ ಬಳಕೆ ಕಡ್ಡಾಯವಾಗಿರುತ್ತದೆ.