ಖಾಸಗಿ ಶಿಕ್ಷಕರ ಬೇಡಿಕೆಗಳ ಶೀಘ್ರ ಈಡೇರಿಕೆಗೆ ಸೂಕ್ತ ಕ್ರಮ: ಗೃಹ ಸಚಿವ ಬೊಮ್ಮಾಯಿ

Update: 2020-12-16 15:08 GMT

ಬೆಂಗಳೂರು, ಡಿ.16: ಖಾಸಗಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳು ಸರಕಾರದ ಗಮನಕ್ಕೆ ಬಂದಿವೆ. ಅವರೆಲ್ಲಾ ಬೇಡಿಕೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಧರಣಿಯಲ್ಲಿ ಶಿಕ್ಷಕರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ಸಮಾಜದಲ್ಲಿ ಗೌರವಯುತವಾಗಿ ಬದುಕುವಂತಾಗಬೇಕು. ಈ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದೆಂದು ಅವರು ತಿಳಿಸಿದ್ದಾರೆ.

ಈ ವೇಳೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪರಿಷತ್ ಸದಸ್ಯ ಪುಟ್ಟಣ್ಣ, ಸಂಸದ ಶಿವಕುಮಾರ್ ಉದಾಸಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News