×
Ad

ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಹುಟ್ಟುಹಬ್ಬ ಆಚರಿಸಿದ ಕುಮಾರಸ್ವಾಮಿ

Update: 2020-12-16 20:58 IST

ಚಿಕ್ಕಮಗಳೂರು, ಡಿ.15: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 61ನೇ ಹುಟ್ಟುಹಬ್ಬವನ್ನು ಜಿಲ್ಲೆಯ ಮುಳ್ಳಯ್ಯನಗಿರಿ ಸಮೀಪದ ರೆಸಾರ್ಟ್ ಒಂದರಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಮಂಗಳವಾರವೇ ಜಿಲ್ಲೆಗೆ ಆಗಮಿಸಿ ರೆಸಾರ್ಟ್ ನಲ್ಲಿ ತಂಗಿದ್ದರು ಎಂದು ಹೇಳಲಾಗುತ್ತಿದ್ದು, ಕುಮಾರಸ್ವಾಮಿ ಅವರು ಜಿಲ್ಲೆಗೆ ಬರುವ ವಿಚಾರವನ್ನು ತಮ್ಮ ಪಕ್ಷದ ಮುಖಂಡರಿಗೂ ತಿಳಿಸಿರಲಿಲ್ಲ ಎಂದು ತಿಳಿದು ಬಂದಿದೆ.

ಹುಟ್ಟು ಹಬ್ಬದ ಕೇಕ್ ಕತ್ತರಿಸುವ ಸಂದರ್ಭದಲ್ಲಿ ಸ್ಥಳೀಯ ಜೆಡಿಎಸ್ ಮುಖಂಡ ಸಿರಾಜ್, ಶಾಸಕ ಸಾ.ರಾ.ಮಹೇಶ್, ವಿಧಾನಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News