×
Ad

ಗ್ರಾಪಂ ಚುನಾವಣೆ ಪ್ರಜಾಪ್ರಭುತ್ವದ ಹಬ್ಬ: ಪ್ರಮೋದ್ ಮಧ್ವರಾಜ್

Update: 2020-12-16 21:10 IST

ಉಡುಪಿ, ಡಿ.16: ಗ್ರಾಮ ಪಂಚಾಯತ್ ಚುನಾವಣೆ ಅಂದರೆ ಪ್ರಜಾ ಪ್ರಭುತ್ವದ ಹಬ್ಬ. ಚುನಾವಣೆಯಲ್ಲಿ ಸ್ಪರ್ಧೆ ಮುಖ್ಯ. ಸೋಲು ಗೆಲುವು ನಮ್ಮ ಹಣೆಯಲ್ಲಿ ಬರೆದಂತಾಗುತ್ತದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆ ಯಲ್ಲಿ ಸ್ಪರ್ಧಿಸಿರುವುದು ಸಂತೋಷ ತಂದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರಗಿದ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಂಚಾಯತ್‌ಗಳ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಹಾಗೂ ವೀಕ್ಷಕರ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕುಶಲ್ ಶೆಟ್ಟಿ ಮಾತನಾಡಿ ದರು. ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಕಾರ್ಯ ದರ್ಶಿ ಮುರಳಿ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗ ಘಟಕದ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆ ಬೈಲ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೀರ್ತಿ ಶೆಟ್ಟಿ, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ ಬೈಲೂರು, ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News