ಇಂದಿನಿಂದ ಭಾರತ-ಆಸ್ಟ್ರೇಲಿಯ ಪ್ರಥಮ ಕ್ರಿಕೆಟ್ ಟೆಸ್ಟ್

Update: 2020-12-17 05:04 GMT

ಅಡಿಲೇಡ್, ಡಿ.17: ಪ್ರವಾಸಿ ಭಾರತ ಮತ್ತು ಆತಿಥೇಯ ಆಸ್ಟ್ರೇಲಿಯ ತಂಡಗಳ ನಡುವೆ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ ಆಡಿಲೇಡ್‌ನಲ್ಲಿ ಗುರುವಾರ ಆರಂಭಗೊಳ್ಳಲಿದೆ. ಈಗಾಗಲೇ ನಡೆದಿರುವ ಟ್ವೆಂಟಿ-20 ಸರಣಿಯಲ್ಲಿ ಭಾರತ 2-1 ಮತ್ತು ಏಕದಿನ ಸರಣಿಯನ್ನು ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೂ ಇದೀಗ ಸವಾಲಾಗಿದೆ.

ಭಾರತದ ಆರಂಭಿಕ ಬ್ಯಾಟಿಂಗ್ ಸ್ಥಾನವನ್ನು ಯಾರು ತುಂಬಲಿದ್ದಾರೆ ಎನ್ನುವುದು ಸ್ಪಷ್ಟಗೊಂಡಿಲ್ಲ. ಪೃಥ್ವಿ ಶಾ ಮತ್ತು ಮಯಾಂಕ್ ಅಗರ್ವಾಲ್ ಅವರು ಇನಿಂಗ್ಸ್ ಆರಂಭಿಸಿ ನ್ಯೂಝಿಲ್ಯಾಂಡ್‌ನಲ್ಲಿ ಫ್ಲಾಪ್ ಆಗಿದ್ದಾರೆ. ಈ ಕಾರಣದಿಂದಾಗಿ ಅವರಿಗೆ ಇನಿಂಗ್ಸ್ ಆರಂಭಿಸಲು ಅವಕಾಶ ನೀಡುವ ಸಾಧ್ಯತೆ ಇಲ್ಲ. ಶುಭ್‌ಮನ್ ಗಿಲ್ ಅವರನ್ನು ತಂಡದ ಭವಿಷ್ಯದ ಹಿತದೃಷ್ಟಿಯಿಂದ ಕೊಹ್ಲಿ ಮತ್ತು ರವಿಶಾಸ್ತ್ರಿ ಕಣಕ್ಕಿಳಿಸಲು ಯೋಚಿಸುತ್ತಿದ್ದಾರೆ.ಲೋಕೇಶ್ ರಾಹುಲ್ ಟೆಸ್ಟ್‌ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಅವರನ್ನು ಕಡೆಗಣಿಸಬಹುದೇ ಎನ್ನುವುದು ಗೊತ್ತಾಗಿಲ್ಲ.

ಟೆಸ್ಟ್ ಪಂದ್ಯಕ್ಕೆ ಎರಡು ದಿನಗಳ ಮೊದಲು ಗಿಲ್ ಅವರ ಬ್ಯಾಟಿಂಗ್ ಬಗ್ಗೆ ಆ್ಯಲನ್ ಬಾರ್ಡರ್ ಮತ್ತು ಸುನೀಲ್ ಗವಾಸ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗಿದ್ದರೂ ತಂಡದ ಸ್ಪಷ್ಟ ಚಿತ್ರಣ ಹೊರಹೊಮ್ಮಿಲ್ಲ. ಸರಣಿಯ ಹೊಳೆಯುವ ಟ್ರೋಫಿಯಲ್ಲಿ ಬಾರ್ಡರ್ ಮತ್ತು ಗವಾಸ್ಕರ್ ಹೆಸರನ್ನು ಕೆತ್ತಲಾಗಿದೆ. ಹನುಮ ವಿಹಾರಿ ಅವರು ತಮ್ಮ ಎರಡು ವರ್ಷಗಳಲ್ಲಿ ಭಾರತೀಯ ತಂಡದೊಂದಿಗೆ ಯಾವುದೇ ತಪ್ಪು ಮಾಡಿಲ್ಲ ಮತ್ತು ಕೆಲವು ಅರೆಕಾಲಿಕ ಆಫ್-ಬ್ರೇಕ್‌ಗಳನ್ನು ಸಹ ಬೌಲ್ ಮಾಡಬಹುದು ಎನ್ನುವುದನ್ನು ನಿರೀಕ್ಷಿಸಲಾಗಿದೆ. ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಭ್ ಪಂತ್ ಅಥವಾ ವೃದ್ಧಿಮಾನ್ ಸಹಾ ಇವರಲ್ಲಿ ಯಾರಿಗೆ ಅವಕಾಶ ನೀಡಲಾಗುತ್ತದೆ ಎನ್ನುವುದು ಗೊತ್ತಾಗಿಲ್ಲ.

ಪಂದ್ಯದ ಸಮಯ ಸಮಯ ಬೆಳಗ್ಗೆ 9:30

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News