×
Ad

ಡಿ.19: ಡಾ.ವಿರೂಪಾಕ್ಷ ದೇವರಮನೆ ಕೃತಿ ಬಿಡುಗಡೆ

Update: 2020-12-17 17:37 IST

ಉಡುಪಿ, ಡಿ.17: ಸಾವಣ್ಣ ಪ್ರಕಾಶನ ಪ್ರಕಟಿಸಿರುವ ಮನೋರೋಗ ತಜ್ಞ ಡಾ. ವಿರೂಪಾಕ್ಷ ದೇವರಮನೆ ಬರೆದಿರುವ ‘ಥ್ಯಾಂಕ್ಯೂ ಟೀಚರ್’ (ಗುರುವೇ ನಿಮ್ಮನೆಂತು ಮರೆವೆ?) ನೂತನ ಪುಸ್ತಕದ ಲೋಕಾರ್ಪಣೆ ಸಮಾರಂಭ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪ ದಲ್ಲಿ ಡಿ.19ರ ನಿವಾರ ಸಂಜೆ 4:30ಕ್ಕೆ ನಡೆಯಲಿದೆ.

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸ ಲಿದ್ದಾರೆ. ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ, ಡಯಟ್ನ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರು ವಿವಿಧ ವಿಷಯಗಳ ಕುರಿತಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News