×
Ad

ಎಸ್‌ಡಿಎಂ ಆಯುರ್ವೇದ ಕಾಲೇಜು ಶ್ರೀಧನ್ವಂತರಿ ಜಯಂತಿ

Update: 2020-12-17 17:39 IST

ಉದ್ಯಾವರ, ಡಿ.17: ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈದ್ಯವಿದ್ಯೆಗೆ ಅಧಿ ದೇವತೆ ಎನಿಸಿದ ಶ್ರೀಧನ್ವಂತರಿಯ ಜಯಂತಿಯನ್ನು ಈ ಬಾರಿ ಪ್ರಾಂಶುಪಾಲ ಪ್ರೊ.ಜಿ. ಶ್ರೀನಿವಾಸ ಆಚಾಯರರ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಹಾಗೂ ವಿವಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ವಿದ್ಯಾರ್ಥಿಗಳಿಗೆ ನೈಪುಣ್ಯತೆಯ ಪಾರಿತೋಷಗಳನ್ನು ಪ್ರದಾನ ಮಾಡಲಾಯಿತು.

ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಡೀನ್ ಆದ ಪಂಚಕರ್ಮ ವಿಭಾಗ ಪ್ರಾಧ್ಯಾಪಕ ಡಾ. ನಿರಂಜನ್‌ರಾವ್, ಸಹಾಯಕ ಡೀನ್ ಹಾಗೂ ರೋಗನಿಧಾನ ವಿಬಾಗದ ಪ್ರಾಧ್ಯಾಪಕ ಡಾ.ನಾಗರಾಜ್ ಎಸ್., ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಸುಚೇತ ಕುಮಾರಿ, ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವೀರಕುಮಾರ ಕೆ. ಪಾರಿತೋಷಕ ವಿತರಿಸಿದರು.

ವಿದ್ವಾನ್ ಪುರೋಹಿತ ಬಾಲಕೃಷ್ಣ ಭಟ್ ಪೂಜಾ ಕಾರ್ಯಕ್ರಮ ನೆರವೇರಿ ಸಿದರು. ಸಂಹಿತಾ ಸಿದ್ಧಾಂತ ವಿಭಾಗದ ಸಹಪ್ರಾಧ್ಯಾಪಕ ಸುಬ್ರಹ್ಮಣ್ಯ ಭಟ್ ಪಿ ಹಾಗೂ ಮಾನಸರೋಗ ವಿಬಾಗದ ಸಹಪ್ರಾಧ್ಯಾಪಕ ಡಾ. ವಿಜಯೇಂದ್ರ ಭಟ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಂಕೀರ್ತನೆ ನಡೆಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ. ಶ್ರೀನಿವಾಸ ಆಚಾರ್ಯ ವಹಿಸಿದ್ದರು. ಡಾ. ರವಿ ಕೆ.ವಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News