ಮೊದಲ ಟೆಸ್ಟ್: ಆಸ್ಟ್ರೇಲಿಯ ವಿರುದ್ಧ ಭಾರತ 233/6

Update: 2020-12-17 12:33 GMT

ಅಡಿಲೇಡ್: ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಪ್ರವಾಸಿ ಭಾರತ ತಂಡ ಆಸ್ಟ್ರೇಲಿಯ ವಿರುದ್ಧ ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾಗಿದ್ದು ನಾಯಕ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ದಿನದಾಟದ ಮುಕ್ತಾಯಕ್ಕೆ 6 ವಿಕೆಟ್ ಗಳ ನಷ್ಟಕ್ಕೆ 233 ರನ್ ಗಳಿಸಿದೆ.

ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮೊದಲ ಓವರ್ ನ 2ನೇ ಎಸೆತದಲ್ಲಿ ಆರಂಭಿಕ ಆಟಗಾರ ಪೃಥ್ವಿ ಶಾ(0)ವಿಕೆಟ್ ಕಳೆದುಕೊಂಡು ಕಳಪೆ ಆರಂಭ ಪಡೆಯಿತು. ಇನ್ನೋರ್ವ ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಚೇತೇಶ್ವರ ಪೂಜಾರ (43, 160 ಎಸೆತ) ಹಾಗೂ ವಿರಾಟ್ ಕೊಹ್ಲಿ(74, 180 ಎಸೆತ, 8 ಬೌಂಡರಿ)ಮೂರನೇ ವಿಕೆಟ್ ಗೆ 68 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಪೂಜಾರ ಔಟಾದ ಬಳಿಕ ಅಜಿಂಕ್ಯ ರಹಾನೆ(42, 92 ಎಸೆತ)ಜೊತೆ ಕೈಜೋಡಿಸಿದ ಕೊಹ್ಲಿ 4ನೇ ವಿಕೆಟ್ ಜೊತೆಯಾಟದಲ್ಲಿ 88 ರನ್ ಸೇರಿಸಿದರು. ತಂಡದ ಪರ ಮೊದಲ ದಿನದ ಆಟದಲ್ಲಿ ಸರ್ವಾಧಿಕ ಸ್ಕೋರ್ (74, 180 ಎಸೆತ, 8 ಬೌಂಡರಿ) ಗಳಿಸಿದ ಕೊಹ್ಲಿ 77ನೇ ಓವರ್ ನಲ್ಲಿ ಹೇಝಲ್ ವುಡ್-ಲಿಯೊನ್ ಗೆ ರನೌಟಾದರು. ಕೊಹ್ಲಿ ರನೌಟ್ ಆಗುವುದರೊಂದಿಗೆ ಈ ಜೋಡಿ ಬೇರ್ಪಟ್ಟಿತು.

ರಹಾನೆಯನ್ನು ಎಲ್ಬಿಡಬ್ಲು ಬಲೆಗೆ ಬೀಳಿಸಿದ ಸ್ಟಾರ್ಕ್ (2-49)ಮೊದಲ ದಿನದ ಯಶಸ್ವಿ ಬೌಲರ್ ಎನಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News