×
Ad

ರಾಷ್ಟ್ರೀಯ ಆರೋಗ್ಯ ಮಾಹಿತಿ ಕಾರ್ಯಾಗಾರ

Update: 2020-12-17 19:44 IST

ಉಡುಪಿ, ಡಿ.17:ಪ್ರಸಕ್ತ ಸಾಲಿನ ಐಇಸಿ/ಎಸ್‌ಬಿಸಿಸಿ ಕಾರ್ಯಕ್ರಮದಡಿ ನೆಹರು ಯುವ ಕೇಂದ್ರ ಹಾಗೂ ಯುವಸಂಘಗಳ ಪ್ರತಿನಿಧಿಗಳಿಗೆ ಉಡುಪಿ ತಾಲೂಕು ಮಟ್ಟದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಬುಧವಾರ ಪೇತ್ರಿ ಚೇರ್ಕಾಡಿಯ ಸಮೃದ್ಧಿ ಮಹಿಳಾ ಮಂಡಳಿಯಲ್ಲಿ ನಡೆಯಿತು.

ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ, ವಿಲ್ಪ್ರೆಡ್ ಡಿಸೋಜ ಕಾರ್ಯಾಗಾರವನ್ನು ಉದ್ಘಾಟಿಸಿ, ಸರಕಾರದ ವತಿಯಿಂದ ಸಿಗುವ ಸವಲತ್ತುಗಳ ಉಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಚೇರ್ಕಾಡಿ ಸಮೃದ್ಧಿ ಮಹಿಳಾ ಮಂಡಳಿಯ ಅಧ್ಯಕ್ಷೆ ಪ್ರಸನ್ನ ಪ್ರಸಾದ್ ಭಟ್, ಉತ್ತಮ ಆಹಾರ ಪದ್ಧತಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯ ಬಾಯಿ, ತಾಯಿ ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪಪಟಗಾರ್, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಪ್ರಸ್ತುತ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಕುರಿತು ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಮೃದ್ಧಿ ಮಹಿಳಾ ಮಂಡಳಿ ಸದಸ್ಯೆ ವನಿತಾ ಶೆಟ್ಟಿ ಸ್ವಾಗತಿಸಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News