ದಿಲ್ಲಿಯಲ್ಲಿ ಹೋರಾಟ ಮಾಡುತ್ತಿರುವವರು ರೈತರಲ್ಲ, ಕಾಂಗ್ರೆಸ್ ಕಾರ್ಯಕರ್ತರು ಎಂದ ಸಚಿವ ಪ್ರಭು ಚೌಹಾಣ್

Update: 2020-12-17 16:34 GMT

ಯಾದಗಿರಿ, ಡಿ.17: ಕೇಂದ್ರ ಸರಕಾರ ಜಾರಿ ಮಾಡಿರುವ ಕೃಷಿ ತಿದ್ದುಪಡಿ ಮಸೂದೆಗಳ ವಿರುದ್ಧ ಹೊಸದಿಲ್ಲಿಯಲ್ಲಿ ಹೋರಾಟ ಮಾಡುತ್ತಿರುವವರು ರೈತರಲ್ಲ. ಬದಲಿಗೆ, ರೈತರ ವೇಷದಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರೆಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಸಿರು ಶಾಲು ಹಾಕಿಕೊಂಡಿರುವವರೆಲ್ಲ ರೈತರಲ್ಲ. ರೈತರು ಹೊಲದಲ್ಲಿ ಕೆಲಸ ಮಾಡುವವರು. ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಕಾಂಗ್ರೆಸ್ ಸೇರಿದಂತೆ ಕೆಲವು ಪಕ್ಷಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರೈತರ ಹಿತಕ್ಕಾಗಿ ಕೃಷಿಗೆ ಸಂಬಂಧಿಸಿದ ಮಸೂದೆಗಳಿಗೆ ತಿದ್ದುಪಡಿ ತಂದಿದ್ದಾರೆ. ಇದರಲ್ಲಿ ಏನಾದರು ಸಮಸ್ಯೆಗಳಿದ್ದರೆ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಜನಸಾಮಾನ್ಯರಿಗೆ ಸಮಸ್ಯೆಯಾಗುವ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲವೆಂದು ಅವರು ಅಭಿಪ್ರಾಯಿಸಿದ್ದಾರೆ.

ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಯನ್ನು ಯಾರೇ ವಿರೋಧಿಸಿದರೂ ಅದನ್ನು ಅಂಗೀಕರಿಸುವ ಮೂಲಕ ಬಿಜೆಪಿ ಗೋಮಾತೆಯ ಋಣ ತೀರಿಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ.

-ಪ್ರಭು ಚೌಹಾಣ್, ಪಶುಸಂಗೋಪನೆ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News