ಮೈಸೂರು: ಸಹಾಯಕ ಸಂರಕ್ಷಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ
Update: 2020-12-18 14:00 IST
ಮೈಸೂರು, ಡಿ.18: ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಅರಣ್ಯ ಭವನದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ವು ಆಸ್ತಿ ಹೊಂದಿದ ಆರೋಪದ ಮೇಲೆ ಎಸಿಎಫ್ ಶಿವಶಂಕರ್ ಅವರ ಸರಸ್ವತಿಪುರಂ ನಲ್ಲಿರುವ ಮನೆ, ನಝರ್ ಬಾದ್ ಮತ್ತು ಜೆಸಿ ಬಡಾವಣೆಗಳಲ್ಲಿರುವ ಮನೆಗಳ ಮೇಲೆ ಏಕಕಾಲದಲ್ಲಿ ಶುಕ್ರವಾರ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.