ದ.ಕ. ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿ: ಪ್ರತಾಪ್ ಸಿಂಹ ನಾಯಕ್
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸಲು ಆಯ್ಕೆ ಮಾಡಿಕೊಂಡಿರುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಕಚೇರಿ ಆರಂಭಿಸಲಾಗಿದೆ. ಪ್ರತಿ ಶುಕ್ರವಾರ ಈ ಕಚೇರಿಯಲ್ಲಿ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಪ್ರತಾಪ್ ಸಿಂಹ ನಾಯಕ್ ಹೇಳಿದ್ದಾರೆ.
*ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇವೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ. ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.