99.9% ನಾಯಕರು ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷರಾಗಲಿ ಎಂದು ಬಯಸುತ್ತಿದ್ದಾರೆ: ಸುರ್ಜೇವಾಲ

Update: 2020-12-18 16:42 GMT

ಹೊಸದಿಲ್ಲಿ,ಡಿ.18: ಕಾಂಗ್ರೆಸ್ ಪಕ್ಷವು ಶೀಘ್ರದಲ್ಲೇ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಿಸಲಿದೆ. ಕಾಂಗ್ರೆಸ್ ನ 99.9% ನಾಯಕರು ರಾಹುಲ್ ಗಾಂಧಿಯೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ ಎಂದು ಕಾಂಗ್ರೆಸ್ ನ ಪ್ರಮುಖ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ. ನಾಳೆಯಿಂದ ಮುಂದಿನ ಹತ್ತು ದಿನಗಳವರೆಗೆ ನಡೆಯಲಿರುವ ಪಕ್ಷದ ಹಿರಿಯ ನಾಯಕರುಗಳ ಸಭೆಯೂ ಈ ಪ್ರಕ್ರಿಯೆಯ ಒಂದು ಭಾಗವಾಗಿದೆ ಎಂದು ಅವರು ತಿಳಿಸಿದ್ದಾರೆ.

“ಪಕ್ಷಕ್ಕೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕಾಂಗ್ರೆಸ್ ನ ಚುನಾವಣಾ ಸಂಸ್ಥೆ, ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಿನ ರಾಷ್ಟ್ರಾಧ್ಯಕ್ಷರ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ನಾನೂ ಸೇರಿದಂತೆ 99.9% ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯೇ ರಾಷ್ಟ್ರಾಧ್ಯಕ್ಷರಾಗಲಿ ಎಂದು ಬಯಸುತ್ತಿದ್ದಾರೆ ಎಂದು ಹೇಳಿದರು.

2017ರಲ್ಲಿ ಸೋನಿಯಾ ಗಾಂಧಿಯವರ ಬಳಿಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನದ ಬಳಿಕ ರಾಹುಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News