ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 8 ಮಂದಿಗೆ ಕೊರೋನ ಸೋಂಕು ದೃಢ
ಉಡುಪಿ, ಡಿ.19: ಜಿಲ್ಲೆಯಲ್ಲಿ ಶನಿವಾರ 8 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. 14 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡರೆ, 110 ಮಂದಿಯಲ್ಲಿ ಮಾತ್ರ ಸೋಂಕು ಸಕ್ರಿಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ತಲಾ ನಾಲ್ವರು ಪುರುಷರು ಹಾಗೂ ಮಹಿಳೆಯರಾಗಿದ್ದಾರೆ. ಒಬ್ಬ ಮಹಿಳೆಯಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಇಂದು ಸೋಂಕು ಪತ್ತೆಯಾದವರಲ್ಲಿ ಉಡುಪಿ ತಾಲೂಕಿನ ಆರು ಮಂದಿ, ಕುಂದಾಪುರ ಮತ್ತು ಕಾರ್ಕಳ ತಾಲೂಕಿನವರು ತಲಾ ಒಬ್ಬರಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
14 ಮಂದಿ ಗುಣಮುಖ: ಶುಕ್ರವಾರ ಜಿಲ್ಲೆಯಲ್ಲಿ 14 ಮಂದಿ ಚಿಕಿತ್ಸೆಯಿಂದಾಗಿ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,656ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 110 ಮಂದಿ ಕೆವಿಡ್‌ಗೆ ಸಕ್ರಿಯರಿದ್ದಾರೆ ಎಂದರು.
1352 ನೆಗೆಟಿವ್: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 1365 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1352 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದ 13 (ಐಸಿಎಂಆರ್ ವರದಿ) ಮಂದಿಯಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,954ಕ್ಕೇರಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಒಟ್ಟು 2,72,036 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,49,082 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,954 ಮಂದಿ ಪಾಸಿಟಿವ್ ಬಂದಿದ್ದರೆ, 22,656 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 188 ಎಂದು ಇಲಾಖೆ ತಿಳಿಸಿದೆ.