ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಡಿ.ಎನ್.ಜೀವರಾಜ್ ನೇಮಕ
Update: 2020-12-19 21:55 IST
ಬೆಂಗಳೂರು, ಡಿ. 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ಶನಿವಾರ ಆದೇಶ ಹೊರಡಿಸಿದ್ದಾರೆ.