ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2020-12-19 17:03 GMT

ಮಂಗಳೂರು, ಡಿ.19: 2021ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಇ-ಸ್ಕಾಲರ್‌ಶಿಪ್ ಯೋಜನೆಯಡಿ ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದ್ಯಾರ್ಥಿ ವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ www.scholarship.gov.in ವೆಬ್ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಮೂಲ ಪ್ರತಿಯನ್ನು ಆಯಾ ತಾಲೂಕಿನ ವಿಆರ್‌ಡಬ್ಲೂ ಎಂಆರ್‌ಡಬ್ಲೂ ಹಾಗೂ ಯುಆರ್‌ಡಬ್ಲೂಗಳ ಗ್ರಾಪಂಗೆ ಡಿ.31ರೊಳಗೆ ಸಲ್ಲಿಸಬೇಕು.

ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.disabilityaffairs.gov.in ಅಥವಾ ದೂ.ಸಂ. 0824-2458173ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News