ಪಡಿತರ ಚೀಟಿ ಅರ್ಜಿ ಸಲ್ಲಿಕೆ: ಜ.1ರ ಬಳಿಕ ಆರಂಭ ಸಾಧ್ಯತೆ
Update: 2020-12-19 22:40 IST
ಬೆಂಗಳೂರು, ಡಿ.19: ಕೋವಿಡ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸುವ, ಬಾಕಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಆಹಾರ ಇಲಾಖೆ ಜ.10ರ ನಂತರ ಆರಂಭಿಸುವ ಸಾಧ್ಯತೆಯಿದೆ.
ಆಹಾರ ಸಚಿವ ಕೆ.ಗೋಪಾಲಯ್ಯ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭಿಸಲಾಗುವುದು ಎಂದಿದ್ದರು. ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇರುವುದರಿಂದ ನಿಲ್ಲಿಸಲಾಗಿದೆ. ಜನವರಿ ಎರಡನೇ ವಾರದಲ್ಲಿ ಅನುಮತಿ ಸಿಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 35.56 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿತ್ತು. ಇದರಲ್ಲಿ 31.77 ಲಕ್ಷ ಅರ್ಜಿಗಳು ವಿಲೇವಾರಿಯಾಗಿದ್ದು, 3.78 ಲಕ್ಷ ಅರ್ಜಿಗಳು ಬಾಕಿ ಉಳಿದಿವೆ.