×
Ad

​ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್

Update: 2020-12-19 22:44 IST

ಮಂಗಳೂರು, ಡಿ.19: ನಗರದ ರಥಬೀದಿ ಮಹಮ್ಮಾಯಿ ದೇವಸ್ಥಾನದ ಬಳಿಯಿಂದ ನವಭಾರತ್ ಸರ್ಕಲ್ ಸಂಪರ್ಕಿಸುವ ರಸ್ತೆಯವರೆಗೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಒಳ ಚರಂಡಿ, ಫುಟ್ಪಾತ್‌ರಸ್ತೆ ಕಾಂಕ್ರಿಟೀಕರಣ ಹಾಗೂ ರಸ್ತೆಯ ಬದಿ ಚರಂಡಿ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು ಕಾರ್‌ಸ್ಟ್ರೀಟ್ ಮಹಮ್ಮಾಯಿ ದೇವಸ್ಥಾನದಿಂದ ನವಭಾರತ್ ಸಂಪರ್ಕಿಸುವ ರಸ್ತೆಯವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಹೊಸದಾಗಿ ಒಳಚರಂಡಿ ಕಾಮಗಾರಿ, 9 ಮೀಟರ್ ಅಗಲದಲ್ಲಿ ಕಾಂಕ್ರೀಟ್ ರಸ್ತೆ, 1.5 ಮೀಟರ್ ಪುಟ್ಪಾತ್ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಮಳೆನೀರು ಹರಿದು ಹೋಗಲು ಚರಂಡಿ ನಿರ್ಮಿಸಲಾಗುತ್ತದೆ. ರಥೋತ್ಸವ ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭ ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಮುರಳೀಧರ್ ನಾಯಕ್, ವಸಂತ್ ಜೆ. ಪೂಜಾರಿ, ಗಿರೀಶ್, ಮಹಮ್ಮಾಯಿ ದೇವಸ್ಥಾನದ ಶಿವ ಭಟ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News