×
Ad

ಜೆಡಿಎಸ್‍ನ ಯಾವುದೇ ಶಾಸಕರೂ ಬಿಜೆಪಿಗೆ ಬರುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

Update: 2020-12-20 18:57 IST

ಬೆಂಗಳೂರು, ಡಿ. 20: 'ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ಸರಿಯಷ್ಟೆ. ಆದರೆ, ಜೆಡಿಎಸ್‍ನ ಯಾವುದೇ ಶಾಸಕರು, ಬಿಜೆಪಿಗೆ ಬರುವುದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಯಡಿಯೂರಪ್ಪ, ಕೇವಲ ವಿಧಾನ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧ ಮಸೂದೆಯ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಅಧ್ಯಾದೇಶ (ಸುಗ್ರೀವಾಜ್ಞೆ)ದ ಮೂಲಕ ಗೋಹತ್ಯೆ ನಿಷೇಧ ವಿಧೇಯಕ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿವರಣೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News