33 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ ಸ್ಥಾನ ಬಾಚಿಕೊಂಡ ಕಾಂಗ್ರೆಸ್

Update: 2020-12-20 15:31 GMT

ಜೈಪುರ: ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಒಟ್ಟು 45 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 33ರಲ್ಲಿ ಅಧ್ಯಕ್ಷ ಸ್ಥಾನ ಪಡೆದುಕೊಳ್ಳಲು ಯಶಸ್ವಿಯಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ರವಿವಾರ ಮತದಾನ ನಡೆದಿತ್ತು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಪಕ್ಷ ಬಿಜೆಪಿ 10 ಸಂಸ್ಥೆಗಳಲ್ಲಿ ಅಧ್ಯಕ್ಷ ಸ್ಥಾನಗಳನ್ನು ತನ್ನದಾಗಿಸಿಕೊಂಡರೆ, ಪಕ್ಷೇತರರು ಎರಡು ಸ್ಥಳೀಯ ಸಂಸ್ಥೆಗಳಲ್ಲಿ ಜಯ ಸಾಧಿಸಿದ್ದಾರೆ. ಈ ಮೊದಲು ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಮತದಾನವು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ನಡೆದಿತ್ತು. ಚುನಾವಣೆಯಲ್ಲಿ 101 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಉಪಾಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ಚುನಾವಣೆಯು ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News