ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಪೊಲೀಸ್: ಆರೋಪ

Update: 2020-12-20 17:20 GMT

ಬೆಂಗಳೂರು, ಡಿ.20: ಕಸ ವಿಲೇವಾರಿ ಮಾಡುತ್ತಿದ್ದ ಪೌರಕಾರ್ಮಿಕರ ಮೇಲೆ ಸಂಚಾರ ಇನ್ಸ್ ಪೆಕ್ಟರ್ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾಗಡಿ ರಸ್ತೆ ಸಂಚಾರ ಠಾಣೆ ಇನ್‍ಸ್ಪೆಕ್ಟರ್ ಆನಂದ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ವಿಡಿಯೊದಲ್ಲಿ ಏನಿದೆ?: ಮಾಗಡಿ ರಸ್ತೆಯ ರಾಯಪುರ ವಾರ್ಡ್ ಸಮೀಪ ರಸ್ತೆ ಬದಿ ಕಸ ತುಂಬಿದ್ದ ಆಟೊ ನಿಲ್ಲಿಸಲಾಗಿತ್ತು. ಅಲ್ಲಿಗೆ ಬರುವ ಸಬ್‍ಇನ್‍ಸ್ಪೆಕ್ಟರ್ ಹಾಗೂ ಇನ್‍ಸ್ಪೆಕ್ಟರ್, ನೋ ಪಾರ್ಕಿಂಗ್ ಇದೆ ಎಂದು ಪೌರಕಾರ್ಮಿಕರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ, ಹಲ್ಲೆ ಮಾಡುವ ವಿಡಿಯೋವನ್ನು.ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಘಟನೆ ಸಂಬಂಧ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಮಾಗಡಿ ರಸ್ತೆ ಪೊಲೀಸ್ ಇನ್‍ಸ್ಪೆಕ್ಟರ್ ಆನಂದ್ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ದ ಬಿಬಿಎಂಪಿ ಜಂಟಿ ಪೊಲೀಸ್ ಆಯುಕ್ತರಿಗೆ ದಲಿತ ಸಂಘರ್ಷ ಸಮಿತಿ ದೂರು ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News