ಮಾಜಿ ಪ್ರಧಾನಿ ಅಟಲ್ ಜನ್ಮದಿನಾಚರಣೆ: ಡಿ.25ಕ್ಕೆ ರಕ್ತದಾನ ಶಿಬಿರ
Update: 2020-12-21 20:06 IST
ಉಡುಪಿ, ಡಿ.21: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಡಿ.25ರ ಬೆಳಗ್ಗೆ 9 ರಿಂದ ಅಪರಾಹ್ನ 2 ರವರೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ.ಪ್ರದೀಪ್ ವರ್ಣೇಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಕ್ತದಾನ ಶಿಬಿರದಲ್ಲಿ ಸುಮಾರು 125 ಯುನಿಟ್ ರಕ್ತ ಸಂಗ್ರಹದ ಗುರಿ ಹೊಂದಲಾಗಿದೆ. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಅವರು ವಿನಂತಿಸಿದ್ದಾರೆ.