×
Ad

ಯಕ್ಷಗಾನ ಅಕಾಡಮಿಯ 2020ನೆ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Update: 2020-12-21 22:14 IST

ಮಂಗಳೂರು, ಡಿ.21: ಕರ್ನಾಟಕ ಯಕ್ಷಗಾನ ಅಕಾಡಮಿಯ 2020ನೆ ಸಾಲಿನ ಗೌರವ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಅಕಾಡಮಿಯ ಅಧ್ಯಕ್ಷ ಎಂ.ಎ.ಹೆಗಡೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು 2021ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.

‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗಕರ್ತೃರಾದ ಡಿ.ಎಸ್.ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 1 ಲಕ್ಷ ರೂ.ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ.

ಗೌರವ ಪ್ರಶಸ್ತಿಗೆ ಬಿ.ಸಂಜೀವ ಸುವರ್ಣ, ಕೆ.ತಿಮ್ಮಪ್ಪಗುಜರನ್, ಡಾ. ವಿಜಯ ನಳಿನಿ ರಮೇಶ್, ಡಾ. ಚಕ್ಕೆರೆ ಶಿವಶಂಕರ್, ಬಿ.ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 50,000 ರೂ.ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ.

‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಗೋಪಾಲ ಆಚಾರ್ಯ ತೀರ್ಥಹಳ್ಳಿ, ಬೇಲ್ತೂರು ರಮೇಶ್, ಆವರ್ಸೆ ಶ್ರೀನಿವಾಸ ಮಡಿವಾಳ, ಹರಿನಾರಾಯಣ ಬೈಪಾಡಿತ್ತಾಯ, ಸಂಜಯ್ ಕುಮಾರ್ ಶೆಟ್ಟಿ, ಎಂ.ಆರ್.ಹೆಗಡೆ ಕಾನಗೋಡ, ಸುಬ್ರಹ್ಮಣ್ಯ ಧಾರೇಶ್ವರ, ವಿಟ್ಲ ಶಂಭು ಶರ್ಮ, ಹನುಮಂತರಾ ಯಪ್ಪ, ಎ.ಎಂ.ಮುಳವಾಗಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 25,000 ರೂ. ನಗದು, ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಸುದ್ದಿಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ, ಸದಸ್ಯರಾದ ರಾಧಾಕೃಷ್ಣ ಕಲ್ಚಾರ್, ಕದ್ರಿ ನವನೀತ ಶೆಟ್ಟಿ, ದಾಮೋದರ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News