ಬೆಂಗಳೂರು ಗಲಭೆ ಪ್ರಕರಣ: ಮತ್ತೆ 17 ಆರೋಪಿಗಳನ್ನು ಬಂಧಿಸಿದ ಎನ್‌ಐಎ

Update: 2020-12-21 17:15 GMT

ಬೆಂಗಳೂರು, ಡಿ.21: ಡಿಜೆ-ಕೆಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಾರೆ ಎನ್ನಲಾದ 17 ಮಂದಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.

ಎಸ್‌ಡಿಪಿಐ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ.ಶರೀಫ್, ಕೆ.ಜೆ.ಹಳ್ಳಿ ವಾರ್ಡ್‌ ಸಂಘಟನೆಯ ಅಧ್ಯಕ್ಷ ಇಮ್ರಾನ್ ಅಹ್ಮದ್ ಹಾಗೂ ಮುಖಂಡರಾದ ಶಬ್ಬೀರ್ ಖಾನ್ ಮತ್ತು ಶೇಕ್ ಅಝ್ಮಲ್, ನಾಗವಾರ ವಾರ್ಡ್‌ ಎಸ್‌ಡಿಪಿಐ ಅಧ್ಯಕ್ಷ ಅಬ್ಬಾಸ್, ಇರ್ಫಾನ್ ಖಾನ್ ಮತ್ತು ಅಕ್ಬರ್ ಖಾನ್ ಸೇರಿ 17 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಹೊಸದಾಗಿ 17 ಮಂದಿ ಬಂಧಿಸುವ ಮೂಲಕ, ಬಂಧಿತರ ಸಂಖ್ಯೆ 187ಕ್ಕೇರಿದ್ದು ಪ್ರಕರಣದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ತೀವ್ರ ಗೊಳಿಸಿದ್ದಾರೆ. 

ಆಗಸ್ಟ್ 11ರಂದು ರಾತ್ರಿ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ದುಷ್ಕರ್ಮಿಗಳ ತಂಡ ಗಲಭೆ ಸೃಷ್ಟಿಸಿತ್ತು. ಠಾಣೆಗೆ ಹಾಗೂ 60ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿತ್ತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೂ ನುಗ್ಗಿ ಬೆಂಕಿ ಹಚ್ಚಲಾಗಿತ್ತು. ತದನಂತರ ಈ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News