×
Ad

ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

Update: 2020-12-21 23:15 IST

ಬೆಂಗಳೂರು, ಡಿ.21: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿನಯ್‍ಕುಮಾರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಕಾಟನ್ ಪೇಟೆಯಲ್ಲಿ ದಾಖಲಿಸಿದ್ದ ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಆರೋಪಿ ವಿನಯ್ ನಂಟು ಹೊಂದಿದ್ದ. ಇದಾದ ಬಳಿಕ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಪರಾರಿಯಾಗಿದ್ದ. ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ವಿನಯ್ ಅರ್ಜಿಯನ್ನು ಎನ್‍ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿತ್ತು.

ಜಾಮೀನು ನ್ಯಾಯಾಲಯ ವಜಾಗೊಳಿಸಿದ ನಂತರವೂ ತಲೆಮರೆಸಿಕೊಂಡಿದ್ದ ಆತನನ್ನು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News