×
Ad

ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ

Update: 2020-12-22 10:31 IST

ಉಡುಪಿ, ಡಿ.22: ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಡೆಯುತ್ತಿರುವ ಮೊದಲ ಹಂತದ ಗ್ರಾಪಂ ಸಾರ್ವತ್ರಿಕ ಚುನಾವಣೆ ಶಾಂತಿಯುತವಾಗಿದ್ದು, ಬೆಳಗ್ಗೆ 9 ಗಂಟೆ ವೇಳೆ 14.7 ಶೇ. ಮತದಾನವಾಗಿದೆ.

ಉಡುಪಿ, ಬೈಂದೂರು, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕುಗಳ ಒಟ್ಟು 66 ಗ್ರಾಪಂಗಳ 402 ಕ್ಷೇತ್ರಗಳ 1,066 ಸ್ಥಾನಗಳಿಗೆ ಒಟ್ಟು 543 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಬ್ರಹ್ಮಾವರದಲ್ಲಿ 16.49 ಶೇ., ಉಡುಪಿಯಲ್ಲಿ 15.87 ಶೇ., ಹೆಬ್ರಿ 15.47 ಶೇ. ಹಾಗೂ ಬೈಂದೂರಿನಲ್ಲಿ 11.49 ಶೇ. ಮತದಾನವಾಗಿದೆ.

ಜಿಲ್ಲೆಯಲ್ಲಿ ಬಿರುಸಿನಿಂದ ಕೂಡಿದ ಮತದಾನವಾಗುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿರುವುದು ಕಂಡುಬರುತ್ತಿದೆ.

ಮತಗಟ್ಟೆಗಳಲ್ಲಿ ಕೋವಿಡ್-19 ನಿಯಮ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬರ ಮತದಾರರ ಕೈಗೆ ಸ್ಯಾನಿಟೈಸರ್ ಹಾಕಿ, ಉಷ್ಣಾಂಶವನ್ನು ಪರಿಶೀಲಿಸಿದ ಬಳಿಕ ಒಳಬಿಡಲಾಗುತ್ತಿದೆ. ಇದಕ್ಕೆ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳ ಒಟ್ಟು 66 ಗ್ರಾಪಂಗಳ 402 ಕ್ಷೇತ್ರಗಳ 1,066 ಸ್ಥಾನಗಳಿಗೆ ಒಟ್ಟು 543 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, 3,70,323 ಮತದಾರರ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,349 ಅಭ್ಯರ್ಥಿಗಳು ಕಣದಲ್ಲಿದ್ದು, 63 ಮಂದಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News