ಸುಳ್ಳು ಆಸ್ತಿ ಪ್ರಮಾಣ ಸಲ್ಲಿಕೆ ಆರೋಪ: ಮೈಸೂರು ಮನಪಾ ಓರ್ವ ಸದಸ್ಯೆಯ ಸದಸ್ಯತ್ವ ರದ್ದು
Update: 2020-12-22 13:00 IST
ಮೈಸೂರು, ಡಿ.22: ಸುಳ್ಳು ಆಸ್ತಿ ಪ್ರಮಾಣ ಪತ್ರ ನೀಡಿ ಮಹಾನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದ ಆರೋಪದಲ್ಲಿ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವವನ್ನು ರದ್ದುಗೊಳಿದಲಾಗಿದೆ.
ಮೈಸೂರು ನಗರದ 36ನೇ ವಾರ್ಡ್ನ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ 2018 ರಲ್ಲಿ ನಡೆದ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸುಳ್ಳು ಆಸ್ತಿ ತೋರಿಸಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು ಎನ್ನಲಾಗಿದೆ. ಇವರ ಆಯ್ಕೆಯನ್ನು ಪ್ರಶ್ನಿಸಿ ಕೆಲವರು ಜಿಲ್ಲಾ ನ್ಯಾಯಾಲದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರುಕ್ಮಿಣಿ ಮಾದೇಗೌಡರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ನೀಡಿದೆ.
ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಹೈಕೋರ್ಟ್ ಮೊರೆ ಹೋಗಲಿದ್ದಾರೆ ಎಂದು ತಿಳಿದು ಬಂದಿದೆ.