×
Ad

ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧ ಮಾರಾಟ; ಪರವಾನಿಗೆ ರದ್ದು

Update: 2020-12-22 19:17 IST

 ಉಡುಪಿ, ಡಿ.22: ಉಡುಪಿ ಕೆ.ಎಂ ಮಾರ್ಗದಲ್ಲಿರುವ ಲಂಡನ್ ಮೆಡಿಕಲ್ಸ್ ಸಂಸ್ಥೆಯವರು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಅಮಲು ಬರಿಸುವ ಔಷಧಗಳ ಮಾರಾಟ ಮಾಡುತ್ತಿರುವುದರಿಂದ ಸಂಸ್ಥೆಯ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ, ಈ ಸಂಸ್ಥೆಗೆ ಮಂಜೂರು ಮಾಡಿರುವ ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ ಎಂದು ಉಡುಪಿ ವೃತ್ತ ಸಹಾಯಕ ಔಷಧ ನಿಯಂತ್ರಕರು ಮತ್ತು ಪರವಾನಿಗೆ ಪ್ರಾಧಿಕಾರಿ ಕೆ.ವಿ. ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News