ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ
Update: 2020-12-22 19:21 IST
ಉಡುಪಿ, ಡಿ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಹಯೋಗದೊಂದಿಗೆ ಮಂಗಳವಾರ ಕಾಲೇಜಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಸ್.ಎಸ್ ಪ್ರಸಾದ್ ಬಂಟಕಲ್ಲು ಉಪನ್ಯಾಸ ನೀಡಿದರು. ಕಲಾವಿದ ಶಂಕರದಾಸ ಚಂಡ್ಕಳ ಇವರಿಂದ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ ಮುಖಂಡರಾದ ಸುಂದರ್ ಮಾಸ್ಟರ್, ಕಾಲೇಜಿನ ವಿದ್ಯಾರ್ಥಿಗಳು, ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕಿ ರಜನಿ ಕಾರ್ಯಕ್ರಮ ನಿರೂಪಿಸಿದರು.