×
Ad

ಜ.1ರಿಂದ ಮದ್ಯವ್ಯಸನ ವಿಮುಕ್ತಿ ಶಿಬಿರ

Update: 2020-12-22 19:39 IST

ಉಡುಪಿ, ಡಿ.22: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ್ ಎ.ಬಾಳಿಗಾ ಚಾರೀಟೇಬಲ್ ಟ್ರಸ್ಟ್ ಮುಂಬೈ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ 28ನೇ ಮದ್ಯವ್ಯಸನ ವಿಮುಕ್ತಿ ಶಿಬಿರವನ್ನು ಜ.1ರಿಂದ ಜ.10ರವರೆಗೆ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜ.1ರಂದು ಬೆಳಿಗ್ಗೆ 10ಗಂಟೆಗೆ ಶಿಬಿರವನ್ನು ಉಡುಪಿ ಡಾ..ಟಿ.ಎಂ.ಎ.ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ ಉಮಾಕಾಂತ್ ಉದ್ಘಾಟಿಸಲಿ ರುವರು. ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಲಿರುವರು. ಈ ಸಂದರ್ಭ ದಲ್ಲಿ ಮದ್ಯವ್ಯಸನದಿಂದ ಮುಕ್ತರಾದ ಐವರನ್ನು ಮತ್ತು ಕೋವಿಡ್ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಗುವುದು.

ಜ.10ರಂದು ಬೆಳಗ್ಗೆ 10ಗಂಟೆಗೆ ನಡೆಯಲಿರುವ ಸಮಾರೋಪ ಸಮಾ ರಂಭದಲ್ಲಿ ಮುಖ್ಯ ಅತಿಥಿಗಳಾಗಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾ ನಂದ ಜಿ.ಕತ್ತಲ್‌ಸಾರ್, ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ, ಹಿರಿಯ ವಕೀಲ ದೇವರಾಜ್ ಶೆಟ್ಟಿಗಾರ್, ಐಎಂಎ ಕಾರ್ಯದರ್ಶಿ ಡಾ.ಪ್ರಕಾಶ್ ಭಟ್ ಭಾಗವಹಿಸಲಿರುವರು.

ಕೊರೋನ ಹಿನ್ನೆಲೆಯಲ್ಲಿ ಈ ಬಾರಿಯ ಶಿಬಿರದಲ್ಲಿ 30 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಆಸಕ್ತರು ಡಿ.26ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News