ಈ ಬಾರಿ ಮಾರ್ಚ್ ನಲ್ಲಿ ಎಸೆಸೆಲ್ಸಿ-ಪಿಯುಸಿ ಪರೀಕ್ಷೆ ಇಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Update: 2020-12-22 14:32 GMT

ಬೆಂಗಳೂರು, ಡಿ.22: ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು ಶಾಲಾರಂಭ ಪ್ರಕ್ರಿಯೆ ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ. ಸೀಮಿತ ಅವಧಿಯ ಹಿನ್ನೆಲೆಯಲ್ಲಿ ಮಾರ್ಚ್ 2021ರಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಮಂಗಳವಾರ ಖಾಸಗಿ ಸುದ್ದಿ ವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆ. ಅಲ್ಲದೆ, ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ ವಿದ್ಯಾಗಮ ಕಾರ್ಯಕ್ರಮವನ್ನು, ಖಾಸಗಿ ಶಾಲೆಗಳು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿರುವ ಸಚಿವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಮುಕ್ತ ನಿಲುವನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News