×
Ad

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

Update: 2020-12-22 21:06 IST

ಮಂಗಳೂರು, ಡಿ.22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಪಂ ಕಟ್ಟಡ, ಉರ್ವಸ್ಟೋರ್, ಅಶೋಕನಗರ ಅಂಚೆ, ಮಂಗಳೂರು ದೂ.ಸಂ.: 0824-2451254, 2453071ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News