ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್‍ಗೆ ಕೋವಿಡ್ ದೃಢ
Update: 2020-12-22 23:42 IST
ಬೆಂಗಳೂರು, ಡಿ.22: ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಹಾಗೂ ಆರೋಗ್ಯವಾಗಿದ್ದಾರೆ ಎಂದು ಆಯುಕ್ತರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದಾರೆ.
ಆಯುಕ್ತರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಯುಕ್ತರೊಂದಿಗೆ ಸಭೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಿಬ್ಬಂದಿ ಹಾಗೂ ಆಯುಕ್ತರ ಜೊತೆ ಸಂಪರ್ಕದಲ್ಲಿದ್ದ ಸಾರ್ವಜನಿಕರು ಹೋಂ ಕ್ವಾರಂಟೈನ್‍ಗೆ ಒಳಗಾಗಲು ಮನವಿ ಮಾಡಿದ್ದಾರೆ.