ಯುಕೆಯಲ್ಲಿ ಮತ್ತೆ ಕೋವಿಡ್: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷಾ ಕೇಂದ್ರ ಕಾರ್ಯಾರಂಭ

Update: 2020-12-22 18:19 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.22: ಯುಕೆಯಲ್ಲಿ ಕೋವಿಡ್-19 ಸೋಂಕು ಮತ್ತೆ ಕಾಣಿಸಿಕೊಂಡಿರುವ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಕೊರೋನ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಎನ್‍ಎಬಿಎಲ್ ಮತ್ತು ಐಸಿಎಂಆರ್ ಪ್ರಮಾಣೀಕೃತ ಪರೀಕ್ಷಾ ಸೌಲಭ್ಯವನ್ನು ಪ್ರಯಾಣಿಕರಿಗೆ ನೀಡಲಾಗುತ್ತಿದ್ದು, ಕ್ಷಣಮಾತ್ರದಲ್ಲಿಯೇ ಪರೀಕ್ಷೆಯ ವರದಿ ಪ್ರಯಾಣಿಕರಿಗೆ ಕೈ ಸೇರುತ್ತಿದೆ.

ರಾಜ್ಯ ಸರಕಾರದ ಮಾರ್ಗಸೂಚಿ ಅನ್ವಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಸುರಕ್ಷತಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪ್ರಯಾಣಿಕರು ಪಾಲಿಸಬೇಕಿದೆ. ಪ್ರಯಾಣಿಸುವ ಮುನ್ನ ಕೋವಿಡ್ ಪರೀಕ್ಷೆಗೆ ಒಳಗಾಗದ ಮತ್ತು ವಿದೇಶದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪ್ರಾರಂಭವಾಗಿರುವ ಕೋವಿಡ್-19 ಆರ್‍ಟಿ-ಪಿಸಿಆರ್ ಪರೀಕ್ಷೆ  ಸೌಲಭ್ಯ ಪಡೆಯಬಹುದು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಒಂದು ವೇಳೆ ಈ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟರೆ ಪ್ರಯಾಣಿಕರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳಿಸಲಾಗುತ್ತದೆ. ಇನ್ನು, ವರದಿ ನೆಗೆಟಿವ್ ಬಂದರೆ 14 ದಿನಗಳ ಹೋಮ್ ಕ್ವಾರಂಟೈನ್ ಪ್ರಕ್ರಿಯೆಗೆ ಒಳಗಾಗಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News