ಕುಂಬಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಲು ಒತ್ತಾಯ

Update: 2020-12-22 18:35 GMT

ಬೆಂಗಳೂರು, ಡಿ.22: ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಕುಂಬಾರ ಸಮುದಾಯವನ್ನು ಎಸ್ಟಿ(ಪರಿಶಿಷ್ಟ ಪಂಗಡ) ಸೇರಿಸಬೇಕೆಂದು ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಸರ್ವತೋಮುಖ ಅಭಿವೃದ್ದಿಗೆ ಕುಂಬಾರ ಜಾತಿಯನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಕುಂಬಾರ ಸರಕಾರಿ ನೌಕರರ ಸಂಘದ ಸರ್ವಸದಸ್ಯರ ಒಕ್ಕೊರಲ ನಿರ್ಧಾರವಾಗಿದೆ ಎಂದರು.

ಹಾಗೆಯೇ ರಾಜ್ಯ ಸರಕಾರಕ್ಕೆ ಕುಂಬಾರ ಸಮುದಾಯದ ಅಭಿವೃದ್ದಿಗೆ ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದ್ದು, ಪ್ರಸ್ತುತ ದೇವರಾಜ ಅರಸು ನಿಗಮದಲ್ಲಿರುವ ಕುಂಭ ಕಲಾ ಅಭಿವೃದ್ಧಿ ಮಂಡಳಿಯನ್ನು ಪ್ರತ್ಯೇಕಿಸಿ ಸ್ವತಂತ್ರ ನಿಗಮವನ್ನಾಗಿ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಕುಂಬಾರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿನಿಯರ ವಸತಿನಿಲಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಸಂಸ್ಥೆಯನ್ನು ಸ್ಥಾಪಿಸುವುದು ಸೇರಿದಂತೆ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಸರಕಾರದ ನೆರವು ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News