×
Ad

ರಾತ್ರಿ ಕರ್ಫ್ಯೂ: ದಿನಾಂಕ, ಸಮಯ ಬದಲಾವಣೆ ಮಾಡಿದ ರಾಜ್ಯ ಸರಕಾರ

Update: 2020-12-23 18:00 IST

ಬೆಂಗಳೂರು, ಡಿ.23: ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಯ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಡಿ.24 ರಿಂದ ಜನವರಿ 01 ರವರೆಗೆ ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News