ಡಿ.25ರಂದು ಆರು ರಾಜ್ಯಗಳ ರೈತರೊಂದಿಗೆ ಪ್ರಧಾನಿ ಸಂವಹನ

Update: 2020-12-23 12:55 GMT

ಹೊಸದಿಲ್ಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆರು ರಾಜ್ಯಗಳ ಆಯ್ದ ರೈತರುಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಕಾನೂನುಗಳ ಕುರಿತು ಕೇಂದ್ರ ಸರಕಾರದ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ 9 ಕೋಟಿ ರೈತರುಗಳ ಬ್ಯಾಂಕ್ ಖಾತೆಗಳಿಗೆ ಡಿಜಿಟಲ್ ಮೂಲಕ ಒಟ್ಟು 18,000 ಕೋಟಿ ರೂ. ಜಮಾ ಮಾಡಲಿದ್ದಾರೆ.

ಆರು ರಾಜ್ಯಗಳ ಆಯ್ದ ರೈತರೊಂದಿಗೆ ಪ್ರಧಾನಿ ಸಮಾಲೋಚನೆ ನಡೆಸಲಿದ್ದಾರೆ. ರೈತರು ತಮ್ಮ ಅನುಭವವನ್ನು ಹಂಚಿಕೊಳ್ಳುವುದರೊಂದಿಗೆ ರೈತರ ಕಲ್ಯಾಣಕ್ಕಾಗಿ ಸರಕಾರ ತೆಗೆದುಕೊಂಡಿರುವ ಉಪಕ್ರಮಗಳ ಕುರಿತು ತಿಳಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಬುಧವಾರ ಸಂಜೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಸಾವಿರಾರು ರೈತರುಗಳು ಕೃಷಿ ಕಾನೂನುಗಳ ವಿರುದ್ಧ ಸುಮಾರು ಒಂದು ತಿಂಗಳಿಂದ ದಿಲ್ಲಿ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ನಡುವೆ ತನ್ನ ನಿಲುವಿಗೆ ಅಂಟಿಕೊಂಡಿರುವ ಕೇಂದ್ರ ಸರಕಾರವು ತಾನು ತಂದಿರುವ ಕಾಯ್ದೆಗಳ ಸಮರ್ಥನೆಗೆ 100 ಪತ್ರಿಕಾಗೋಷ್ಟಿಗಳು ಹಾಗೂ 700 ಸಭೆಗಳನ್ನು ನಡೆಸಲು ಯೋಜನೆ ರೂಪಿಸಿದ್ದು, ನಾಳೆ ನಡೆಯಲಿರುವ ಸಂವಹನವು ಈ ಯೋಜನೆಯ ಭಾಗವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News