ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟನೆ
ಉಡುಪಿ, ಡಿ.23: ಉಡುಪಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಬುಧವಾರ ಕಾಲೇಜಿನಲ್ಲಿ ಹಮ್ಮಿ ಕೊಳ್ಳಲಾದ ಉಡುಪಿ ಜಿಲ್ಲಾಮಟ್ಟದ ಯುವ ಜನೋತ್ಸವವನ್ನು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಯುವಜನತೆಯ ಪ್ರತಿಭೆಯನ್ನು ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ಸುರಕ್ಷಾ ಕ್ರಮ ಗಳೊಂದಿಗೆ ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಮಾತನಾಡಿ, ಯುವಜನತೆಯ ಪ್ರತಿಭೆಯನ್ನು ಪ್ರೋತ್ಸಾಹಿಸುವ ಕೆಲಸ ನಡೆಯ ಬೇಕಾಗಿದೆ. ಈ ನಿಟ್ಟಿನಲ್ಲಿ ಯುವ ಜನಸಬಲೀಕರಣ ಇಲಾಖೆ ಪ್ರಯತ್ನಿಸುತ್ತಿದೆ. ಕೋವಿಡ್ ಭೀತಿಯ ಮಧ್ಯೆಯೂ ಯುವಜನತೆಯ ಪ್ರತಿಭೆಗೆ ಕುಂದು ಬಾರದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ರಾಜೇಂದ್ರ ಕೆ. ಉಪ ಸ್ಥಿತರಿದ್ದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜ ವಂದಿಸಿದರು. ಉಪನ್ಯಾಸಕ ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು.
ಜಾನಪದ ನೃತ್ಯ, ಜಾನಪದ ಹಾಡು, ಏಕಾಂಕ ನಾಟಕ, ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದ್ಯ, ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯ, ಆಶು ಭಾಷಣ ಸ್ಪರ್ಧೆಗಳು ನಡೆದವು. ಕೋವಿಡ್ ಹಿನ್ನೆಲೆಯಲ್ಲಿ ಕೆಲವು ಸ್ಪರ್ಧಾಳು ಗಳು ವಿಡಿಯೋ ಚಿತ್ರೀಕರಣ ಮಾಡಿ ಸ್ಪರ್ಧೆಗೆ ಕಳುಹಿಸಿದ್ದು, ಇನ್ನು ಕೆಲವರು ನೇರವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ವಿಜೇತರಾದ ವಿದ್ಯಾರ್ಥಿ ಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ.