ಹೊಸ ರೂಪದ ಕೋರೋನ ನಿಯಂತ್ರಣಕ್ಕೆ ಸರಕಾರ ಮುನ್ನೆಚ್ಚರಿಕೆ ಕ್ರಮ ವಹಿಸಲಿ: ಸಿದ್ದರಾಮಯ್ಯ

Update: 2020-12-23 14:46 GMT

ಬೆಂಗಳೂರು, ಡಿ.23: ಹೊಸ ರೂಪದಲ್ಲಿ ಕಾಣಿಸಿಕೊಂಡಿರುವ ಕೊರೋನ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಜ್ಞ ವೈದ್ಯರ ಸಲಹೆಯೊಂದಿಗೆ ರಾಜ್ಯ ಸರಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಪ್ರಾರಂಭದ ಅವಧಿಯಲ್ಲಿ ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಎದುರಾದು ದುಷ್ಪರಿಣಾಮಗಳನ್ನು ನೆನಪಿನಲ್ಲಿಟ್ಟುಕೊಂಡು ರಾಜ್ಯ ಸರಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ರೂಪಾಂತರಿ ಕೊರೋನ ವೈರಸ್ ನಿಯಂತ್ರಣಕ್ಕಾಗಿ ತಕ್ಷಣ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಪರೀಕ್ಷೆಗೆ ಒಳಪಡಿಸಬೇಕು. ಇದರಲ್ಲಿ ರಿಯಾಯಿತಿ, ವಿನಾಯಿತಿ, ನಿರ್ಲಕ್ಷ್ಯ ಸಲ್ಲದು. ಹಾಗೆಯೇ ಸಾರ್ವಜನಿಕರು ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಮಾಸ್ಕ್ ಹಾಕುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸುರಕ್ಷತಾ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News