×
Ad

ಬ್ರಹ್ಮಕಲಶೋತ್ಸವ ಸರಳವಾಗಿ ಅಚರಿಸಲು ದ.ಕ. ಡಿಸಿ ಆದೇಶ

Update: 2020-12-23 21:51 IST

ಮಂಗಳೂರು, ಡಿ.23: ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜ.3ರಿಂದ 8ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರಳವಾಗಿ ನೆರವೇರಿಸಲು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಕಾರ್ಯಕ್ರಮದ ಆಯೋಜಕರು ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ, ಸುರಕ್ಷಿತ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಕೊವೀಡ್-19 ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೊಜಕರು ಅಥವಾ ದೇವಸ್ಥಾನದ ಆಡಳಿತಾಧಿಕಾರಿ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಸರಕಾರಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News