×
Ad

ಡಿ.31 : ​ರೈತರಿಂದಲೇ ಬೆಳೆ ಸಮೀಕ್ಷೆಗೆ ಕೊನೆಯ ದಿನ

Update: 2020-12-24 19:49 IST

ಉಡುಪಿ, ಡಿ.24: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದರೂ, ಈವರೆಗೆ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರ ಪಾಲ್ಗೊಳ್ಳುವಿಕೆ ತೀರಾ ಕಡಿಮೆಯಾಗಿದೆ. ಆದ್ದರಿಂದ ರೈತರು ಸ್ವತಃ ಬೆಳೆ ಸಮೀಕ್ಷೆಯನ್ನು ಕೈಗೊಳ್ಳುವ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ.

ರೈತರು ಗೂಗಲ್ ಪ್ಲೇಸ್ಟೋರ್‌ನಿಂದ ಅಥವಾ https://play.google.com/store/apps/details?-id=com.csk.RabiTPKfarmer.cropsurvey - ಲಿಂಕ್ ಬಳಸಿ, ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ, ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸ ಬೇಕು. ನಂತರ ಆಧಾರ್ ಕ್ಯೂಆರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓಟಿಪಿ ಬರಲಿದ್ದು, ಓಟಿಪಿಯನ್ನು ದಾಖಲಿಸಿ ಸಲ್ಲಿಸಬೇಕು.

ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ಮಾಲಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಪೋಟೋ ತೆಗೆದು ಮಾಹಿತಿ ಯನ್ನು ಅಪ್‌ಲೋಡ್ ಮಾಡಬೇಕು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆವಿವರ ದಾಖಲಿಸಲು ಬಳಸಲಾಗುವುದು.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರಕಾರ ಅವಕಾಶ ವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಹಿಂಗಾರು -2020ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News