ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಡಿ.24: ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.
ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಮಹಿಳಾ ದಿನಾಚರಣೆ ಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾನೆಮಾಡಿರುವಮಹಿಳೆಯರುಹಾಗೂಕ್ಲಿಷ್ಟಕರಪರಿಸ್ಥಿತಿಯಲ್ಲಿಆತ್ಮಸ್ಥೆರ್ಯದಿಂದ ಹೋರಾಡಿ ಜೀವಾ ಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಮಹಿಳಾ ದಿನಾಚರಣೆ ಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವ ರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ-ಪ್ರತಿಯಲ್ಲಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರಿಗೆ ಜನವರಿ 20ರೊಳಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ದೂ.ಸಂ. 0820-2574978 ಹಾಗೂ 0820-2574972ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.