×
Ad

ವಿಕಲಚೇತನರಿಗೆ ರಿಯಾಯಿತಿ ಬಸ್‌ಪಾಸ್ ನವೀಕರಣಕ್ಕೆ ಸೂಚನೆ

Update: 2020-12-24 19:55 IST

ಉಡುಪಿ, ಡಿ.24: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತಿದೆ.

ವಿಕಲಚೇತನ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿ ಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸಲಾ ಗುತಿದ್ದು, 2020ನೇ ಸಾಲಿನಲ್ಲಿ ವಿತರಿಸಿರುವ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿ.31ಕ್ಕೆ ಮುಕ್ತಾಯಗೊಳ್ಳಲಿದೆ.

2021ನೇ ಸಾಲಿನ ಬಸ್ಸು ಪಾಸುಗಳನ್ನು ಜ.15ರಿಂದ ನವೀಕರಿಸಲು ಕ್ರಮಕೈಗೊಂಡು ಹೊಸ ಪಾಸುಗಳನ್ನು ನೀಡಲಾಗುತ್ತದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ನವೀಕರಿಸಲು ಅನುಕೂಲ ವಾಗುವಂತೆ ಸಾಕಷ್ಟು ಕಾಲಮಿತಿ ನೀಡಲು 2020ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ಫೆ.28ರವರೆಗೆ ಮಾನ್ಯ ಮಾಡಲಾಗುವುದು.

ವಿಕಲಚೇತನರ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್- http://serviceonline.gov.in/karnataka/- ನಲ್ಲಿ ಅರ್ಜಿ ಸಲ್ಲಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News