ದೃಷ್ಟಿದೋಷವುಳ್ಳ ವಿದ್ಯಾರ್ಥಿಗೆ ಉಚಿತ ಲ್ಯಾಪ್‌ಟಾಪ್‌ಗಾಗಿ ಅರ್ಜಿ ಆಹ್ವಾನ
Update: 2020-12-24 20:00 IST
ಉಡುಪಿ, ಡಿ.24: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸೆಸೆಲ್ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ. 40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿ ಗಳಿಗೆ ಉಚಿತ ಲ್ಯಾಪ್‌ಟಾಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಡಿಸೆಂಬರ್ 31ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ:0820-2574810/811ನ್ನು ಸಂಪರ್ಕಿ ಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.