×
Ad

ಜ. 8ರಿಂದ ಕಸಾಪ ಕನ್ನಡ ಪರೀಕ್ಷೆ

Update: 2020-12-24 21:45 IST

ಮಂಗಳೂರು, ಡಿ.24: ಕನ್ನಡ ಸಾಹಿತ್ಯ ಪರಿಷತ್‌ನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜ.8, 9, ಮತ್ತು 10 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.

ಡಿ.30ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ ಗೌರವ ಕಾರ್ಯದರ್ಶಿಗಳ ಬಳಿ ವಿಚಾರಿಸಬಹುದು.

ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ www.kasapa.in ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-26623584ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News