ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ: ನಟಿ ರಾಗಿಣಿ ಆಸ್ಪತ್ರೆಗೆ ದಾಖಲು
Update: 2020-12-24 22:19 IST
ಬೆಂಗಳೂರು, ಡಿ.24: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ, ಅನಾರೋಗ್ಯ ಕಾರಣದಿಂದಾಗಿ ನಗರದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಗಿಣಿ ಬೆನ್ನುನೋವು ಸಮಸ್ಯೆಯಿಂದ ಬಳಲುತ್ತಿದ್ದು, ಬುಧವಾರ ರಾತ್ರಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಆರೋಗ್ಯಾಧಿಕಾರಿಗಳ ಶಿಫಾರಸಿನ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಬಂಧನವಾಗಿರುವ ರಾಗಿಣಿ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನೀಡಲು ಹೈಕೋರ್ಟ್ ನ್ಯಾಯಾಲಯ ನಿರಾಕರಿಸಿತ್ತು. ತನನಂದರ ಜಾಮೀನು ಕೋರಿ ರಾಗಿಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.