ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಹೋರಾಟಕ್ಕೆ ಬೆಂಗಳೂರು ವಕೀಲರ ಸಂಘ ಬೆಂಬಲ

Update: 2020-12-24 17:36 GMT

ಬೆಂಗಳೂರು, ಡಿ.24: ಟೊಯೋಟಾ ಕಿರ್ಲೋಸ್ಕರ್ ಕಂಪೆನಿ ದೇಶದ ಕಾನೂನುಗಳನ್ನು ಗಾಳಿಗೆ ತೂರಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಆರೋಪಿಸಿದ್ದಾರೆ.

ಗುರುವಾರ ಟೊಯೋಟಾ ಕಿರ್ಲೋಸ್ಕರ್ ಕಂಪೆನಿಯ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ 46ನೇ ದಿನದ ಹೋರಾಟಕ್ಕೆ ಬೆಂಬಲ ಘೋಷಿಸಿ ಮಾತನಾಡಿದ ಅವರು, ಜಪಾನ್ ಮೂಲದ ಕಂಪೆನಿಯಾಗಿರುವ ಟೊಯೋಟಾ ಕಿರ್ಲೋಸ್ಕರ್ ಮೊದಲು ಈ ನೆಲದ ಕಾನೂನಿಗೆ ಗೌರವ ಕೊಡಲಿ ಎಂದು ತಿಳಿಸಿದ್ದಾರೆ.

ಟೊಯೋಟಾ ಕಿರ್ಲೋಸ್ಕರ್ ಕಂಪೆನಿಯ ಆಡಳಿತ ಮಂಡಳಿ ಕಾರ್ಮಿಕರ ಕಾನೂನಿಗೆ ಗೌರವ ಕೊಡಬೇಕು. ಕಾರ್ಮಿಕರೇ ಕಾರ್ಖಾನೆಯ ಬೆನ್ನೆಲುಬು ಎಂಬುದನ್ನು ಮರೆಯಬಾರದು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಸಮಸ್ಯೆ ಬಗೆಹರಿಸುವ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಟೊಯೋಟಾ ಕಾರ್ಮಿಕರು ತಮ್ಮ 46ನೇ ದಿನದ ಹೋರಾಟದ ಭಾಗವಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಟೊಯೋಟಾ ಕಿರ್ಲೋಸ್ಕರ್ ಕಂಪೆನಿಯ ಕಾರ್ಮಿಕರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಇವರ ಹಕ್ಕೊತ್ತಾಯಗಳನ್ನು ಕಂಪೆನಿಯ ಆಡಳಿತ ಮಂಡಳಿ ಶೀಘ್ರ ಬಗೆಹರಿಸಲಿ. ಕಾರ್ಮಿಕರಿಗೆ ಅಗತ್ಯವಾದ ಕಾನೂನು ನೆರವು ನೀಡಲು ವಕೀಲರ ಸಂಘ ಸಿದ್ಧವಿದೆ.

-ರಂಗನಾಥ, ಅಧ್ಯಕ್ಷ, ಬೆಂಗಳೂರು ವಕೀಲರ ಸಂಘ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News