ಕಸಾಪ ದತ್ತಿ ಪ್ರಶಸ್ತಿಗೆ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಆಯ್ಕೆ

Update: 2020-12-24 17:37 GMT

ಬೆಂಗಳೂರು, ಡಿ.24: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡುವ 2020ನೇ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಆಯ್ಕೆಯಾಗಿದ್ದಾರೆಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡಲಾಗುವ ಈ ಪ್ರಶಸ್ತಿಗೆ ಹರಿಪ್ರಕಾಶ್ ಕೋಣೆಮನೆ ಒಮ್ಮತದಿಂದ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News