ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಯುವಕ ಬಂಧನ
Update: 2020-12-25 09:24 IST
ಸಂಭಾಲ್, ಡಿ.25: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವೀಡಿಯೊವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.
ಪ್ರತಾಪ್ ಸಿಂಗ್ ಎಂಬಾತ ನೀಡಿದ ದೂರಿನ ಮೇರೆಗೆ ರೋಹಿತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವೃತ್ತಾಧಿಕಾರಿ ಕೆ.ಕೆ.ಸರೋಜ್ ಹೇಳಿದ್ದಾರೆ.
ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎನ್ನಲಾದ ವಿಡಿಯೊ ತುಣುಕನ್ನು ಕೂಡಾ ದೂರುದಾರರು ಹಸ್ತಾಂತರಿಸಿದ್ದಾಗಿ ವಿವರಿಸಿದ್ದಾರೆ. ರಾಜಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.